ಡಿ.5 ರಂದು ಉಪಚುನಾವಣೆ ಹಿನ್ನೆಲೆ: ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ… ಬೆಂಗಳೂರು,ಡಿ3,2019(..): ಡಿಸೆಂಬರ್‌ 5 ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಹಿನ್ನೆಲೆ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಛೇರಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 5 ರಂದು ಹುಣಸೂರು, ಕೆ.ಆರ್ ಪೇಟೆ, ಶಿವಾಜಿನಗರ, ಕೆ.ಆರ್ ಪುರಂ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಕೆ.ಆರ್ ಪೇಟೆ, ರಾಣಿಬೆನ್ನೂರು, ಹಿರೇಕೆರೂರು, ಅಥಣಿ, ಕಾಗವಾಡ, ಯಲ್ಲಾಪುರ, ಗೋಕಾಕ್, ಚಿಕ್ಕಬಳ್ಳಾಪುರ, ಹೊಸಕೋಟೆ, ಹೊಸಪೇಟೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಹೀಗಾಗಿ ಅಯಾಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ, ಅನುದಾನಿತ ಸರ್ಕಾರಿ ಶಾಲಾಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಅಲ್ಲದೇ ಖಾಸಗಿ ಕಾರ್ಖಾನೆಗಳು, ಉದ್ಯಮಗಳು ಅಂದು ನೌಕರರಿಗೆ ವೇತನ ಸಹಿತ ರಜೆ ನೀಡಬೇಕಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಲು ಅನುಕೂಲವಾಗುವಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಡಿಸೆಂಬರ್ 5 ರಂದು ಮತದಾನ ನಡೆದರೇ ಡಿಸೆಂಬರ್ 9 ರಂದು ಫಲಿತಾಂಶ ಹೊರ ಬೀಳಲಿದೆ. : - - 5- –--