ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಪುತ್ರ ಸೂರಜ್ ಸೇರಿ ಐವರ ವಿರುದ್ದ ಎಫ್ ಐಆರ್… ಹಾಸನ,ಡಿ,4,2019(..): ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಸೂರಜ್ ಸೇರಿ ಐವರ ವಿರುದ್ದ ಎಫ್ ಐಆರ್ ಹಾಕಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ಸೇರಿ ಐವರ ವಿರುದ್ದ ದೂರು ದಾಖಲಾಗಿದೆ. ಕೆ.ಆರ್ ಪೇಟೆ ಉಪಚುನಾವಣೆ ಹಿನ್ನೆಲೆ ಪ್ರಚಾರ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ನಿಂಬೆಹಳ್ಳಿ ಬಳಿ ಬಿಜೆಪಿ ಕಾರ್ಯಕರ್ತರ ಮೇಲೆ ಸೂರಜ್ ಹಾಗೂ ಐವರು ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆಗೊಳಗಾದ ಬಿಜೆಪಿಯ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಸೂರಜ್ ಸೇರಿ ಐವರ ವಿರುದ್ದ ಎಫ್ ಐಆರ್ ದಾಖಲಾಗಿದೆ. : - - - –--