ಪಶುವೈದ್ಯೆ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಆಗ್ರಹ… ಮೈಸೂರು,ಡಿ,2,2019(..): ಕಳೆದ ಮೂರ್ನಾಲ್ಕು ದಿನಗಳ ಹಿಂದಷ್ಟೆ ಹೈದರಾಬಾದ್ ನಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರವನ್ನ ಖಂಡಿಸಿ ಮೈಸೂರಿನಲ್ಲಿ ಎಸ್ಸಿಎಸ್ಟಿ ಹಿತರಕ್ಷಣಾ ಸಮಿತಿ ಹಾಗೂ ಕಾನೂನು ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೈಸೂರಿನ ಬಲ್ಲಾಳ್ ವೃತ್ತದಲ್ಲಿ ಎಸ್ಸಿ -ಎಸ್ಟಿ ಹಿತರಕ್ಷಣಾ ಸಮಿತಿ ಹಾಗೂ ಕಾನೂನು ಕಾಲೇಜು ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ಹೈದರಾಬಾದ್ ನಲ್ಲಿ ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ದೇಶವೇ ತಲೆ ತಗ್ಗಿಸುವ ಹೀನ ಕೃತ್ಯ. ದೇಶದಲ್ಲಿ ಇಂತಹ ಕೃತ್ಯ ಮರುಕಳಿಸುತ್ತಿರುವುದು ದುರಾದೃಷ್ಠಕರ. ಅತ್ಯಾಚಾರ ಆರೋಪಿಗಳಿಗೆ ಗಲ್ಲುಗೇರಿಸುವಂತಹ ಕಠಿಣ ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದರು ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆಗೆ ಮೈಸೂರು ಮಹಾನಗರ ಪಾಲಿಕೆ ಸದಸ್ಯೆ ಪಲ್ಲವಿ ಬೇಗಂ ಸಾಥ್ ನೀಡಿದರು. : - – - - -