ರಾಜ್ಯ ಚುನಾವಣಾ ಆಯೋಗದ ಕಚೇರಿ ಎದುರು ಕಾಂಗ್ರೆಸ್ ನಿಂದ ಪ್ರತಿಭಟನೆ… ಬೆಂಗಳೂರು,ನ,25,2019(..); ಬಿಜೆಪಿ ವಿರುದ್ದ ಎಷ್ಟೇ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆ ನಡೆಸಲಾಯಿತು. ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯ ಚುನಾವಣಾಧಿಕಾರಿ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ವಿರುದ್ದ ಎಷ್ಟೇ ದೂರು ನೀಡಿದರೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ. ಚುನಾವಣಾ ಆಯೋಗ ಬಿಜೆಪಿ ಪರ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. : - - – -