15 ಕ್ಷೇತ್ರದಲ್ಲೂ ಬಿಜೆಪಿ ಗೆಲುವು: ಮೂರುವರೆ ವರ್ಷ ಸ್ಥಿರ ಸರ್ಕಾರ- ಸಿಎಂ ಬಿಎಸ್ ವೈ ವಿಶ್ವಾಸ… ಬಳ್ಳಾರಿ,ನ,25,2019(..): ಡಿಸೆಂಬರ್ 5 ರಂದು ಉಪಚುನಾವಣೆ ಹಿನ್ನೆಲೆ, 15 ಕ್ಷೇತ್ರದಲ್ಲೂ ಬಿಜೆಪಿ ಗೆಲುವು ಸಾಧಿಸಲಿದ್ದು ಮೂರುವರೆ ವರ್ಷ ನಾವು ಸ್ಥಿರ ಸರ್ಕಾರ ನೀಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಹೊಸಪೇಟೆಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಸಿದ್ಧರಾಮಯ್ಯ ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರದಲ್ಲೂ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಬಿಎಸ್ ವೈ, ಯಾವುದೇ ಪಕ್ಷದ ಬೆಂಬಲವಿಲ್ಲದೆ ಮೂರುವರೆ ವರ್ಷದ ಅವಧಿಯನ್ನ ಪೂರೈಸುತ್ತೇವೆ. ಪ್ರತಿಪಕ್ಷಗಳಿಗೆ ಕೆಲಸವಿಲ್ಲದೆ ಏನೇನೋ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. : – --15 - - .