ಉಪ ಲೋಕಾಯುಕ್ತರಾಗಿ ನ್ಯಾ. ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ… ಬೆಂಗಳೂರು, ನ,21,2019(..): ಕರ್ನಾಟಕ ಉಪ ಲೋಕಾಯುಕ್ತರಾಗಿ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾ: ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳ ಹೊತ್ತ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕರ್ನಾಟಕ ಲೋಕಾಯುಕ್ತ ನ್ಯಾ : ಪಿ. ವಿಶ್ವನಾಥಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ್ ಭಾಸ್ಕರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅವರೂ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು. : - - - -