ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಮಗ ತೆರಳುತ್ತಿದ್ದ ಕಾರು ಡಿಕ್ಕಿ: ಬೈಕ್ ಸವಾರ ಸಾವು…. ಬೆಂಗಳೂರು,ನ,20,2019(..): ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಗಣೇಶ್ ಪ್ರಯಾಣಿಸುತ್ತಿದ್ದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ನೆಲಮಂಗಲ ತಾಲ್ಲೂಕಿನ ದಾಬಸ್‌ ಪೇಟೆ ಕೈಗಾರಿಕಾ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಬೆಂಗಳೂರು ನಿವಾಸಿ ಯೋಗಾನಂದ್ ಮೃತಪಟ್ಟ ಬೈಕ್ ಸವಾರ. ಶಾಮನೂರು ಶಿವಶಂಕರಪ್ಪ ಪುತ್ರ ಗಣೇಶ್ ಬಿ.ಎಂ.ಡಬ್ಲೂ. ಕಾರಿನಲ್ಲಿ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದಾಬಸ್‌ ಪೇಟೆ ಬಳಿ ಕಾರು ಬೈಕ್ ಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಗಣೇಶ್ ಕಾರು ಚಾಲಕ ಮಂಜುನಾಥ್ ಮತ್ತು ವಿರೇಶ್ ಅಪಾಯದಿಂದ ಪಾರಾಗಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - --- - .