ಪಾಕ್ ಪರ ಘೋಷಣೆ ಕೂಗಿದ್ದು ವರದಿಯಲ್ಲಿ ಸಾಬೀತಾದ್ರೆ ಕೂಗಿದ್ದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ- ಸಿಎಂ ಸಿದ್ದರಾಮಯ್ಯ. ಬೆಂಗಳೂರು , ಫೆಬ್ರವರಿ,28,2024(..):ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು ? ನಿಜ ಆಗಿದ್ದರೆ ಕಠಿಣ ಕ್ರಮ ಆಗುತ್ತದೆ ಎಂದರು. .. , : , 28.: , . . . , . , ? : -------