ರಾಣಿಬೆನ್ನೂರು ಕ್ಷೇತ್ರದಿಂದ ಅರುಣ್ ಕುಮಾರ್ ಪೂಜಾರಗೆ ಬಿಜೆಪಿ ಟಿಕೆಟ್- ಸಿಎಂ ಬಿಎಸ್ ವೈ ಘೋಷಣೆ…. ಬೆಂಗಳೂರು,ನ,15,209(..): ಡಿಸೆಂಬರ್ 5 ರಂದು 15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ, ಈಗಾಗಲೇ ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದು ಇವರಿಗೆ ಬಿಜೆಪಿಯಿಂದ ಟಿಕೆಟ್ ಫಿಕ್ಸ್ ಆಗಿದೆ. ಆದರೆ ರಾಣಿಬೆನ್ನೂರು ಕ್ಷೇತ್ರದಿಂದ ಅನರ್ಹ ಶಾಸಕ ಆರ್. ಶಂಕರ್ ಬದಲು ಅರುಣ್ ಕುಮಾರ್ ಪೂಜಾರಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಅನರ್ಹ ಶಾಸಕ ಆರ್. ಶಂಕರ್ ರನ್ನ ಎಂಎಲ್ ಸಿ ಮಾಡಿ ಮಂತ್ರಿಗಿರಿ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದು ಇದಕ್ಕೆ ಆರ್. ಶಂಕರ್ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆ ರಾಣಿಬೆನ್ನೂರು ಕ್ಷೇತ್ರದಿಂದ ಅರುಣ್ ಕುಮಾರ್ ಪೂಜಾರಗೆ ಟಿಕೆಟ್ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಆರ್. ಶಂಕರ್ ರನ್ನ ಎಂಎಲ್ ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದೆ. ಅದಕ್ಕೆ ಆರ್. ಶಂಕರ್ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ರಾಣಿಬೆನ್ನೂರು ಕ್ಷೇತ್ರದಿಂದ ಅರುಣ್ ಕುಮಾರ್ ಪೂಜಾರಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದರು. : – – - - .