ಭಾರತ-ಬಾಂಗ್ಲಾ ಫಸ್ಟ್ ಟೆಸ್ಟ್: ಟಾಸ್ ಗೆದ್ದ ಬಾಂಗ್ಲಾ ಬ್ಯಾಟಿಂಗ್ ಆಯ್ಕೆ ಇಂದೋರ್‌, ನವೆಂಬರ್ 14, 2019 (..): ಭಾರತ ಹಾಗೂ ಬಾಂಗ್ಲಾದೇಶ ನಡುವೆ ಮೊದಲ ಟೆಸ್ಟ್ ಇಂದು ಇಂದೋರ್ ನಲ್ಲಿ ಆರಂಭವಾಗಿದೆ. ಇಂದೋರ್ ನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧ ಟಾಸ್ ಗೆದ್ದಿರುವ ಬಾಂಗ್ಲಾದೇಶ ನಾಯಕ ಮೊಮಿನುಲ್ ಹಕ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಭಾರತ ತಂಡ ಈ ರೀತಿಯಾಗಿದೆ: ಮಾಯಾಂಕ್ ಅಗರ್ ವಾಲ್, ರೋಹಿತ್ ಶರ್ಮ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ರವೀಂದ್ರ ಜಡೇಜಾ, ವ್ರಿದ್ಧಿಮಾನ್ ಸಹ, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮದ್ ಶಮಿ ಮತ್ತು ಇಶಾಂತ್ ಶರ್ಮಾ .