ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ದರೇ ಒದ್ದು ಒಳಗೆ ಹಾಕುತ್ತೇವೆ- ಡಿಸಿಎಂ ಡಿ.ಕೆ ಶಿವಕುಮಾರ್. ಬೆಂಗಳೂರು,ಫೆಬ್ರವರಿ,28,2024(..):ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ ಪಾಕ್ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ಯಾರೂ ಕೂಡ ಪಾಕ್ ಪರ ಘೋಷಣೆ ಕೂಗಿಲ್ಲ ಯಾರೂದರೂ ಕೂಗಿದ್ದರೇ ಅವರನ್ನ ಒದ್ದು ಒಳಗೆ ಹಾಕುತ್ತೇವೆ ಎಂದು ತಿಳಿಸಿದರು. ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಠಿಸಲು ಯತ್ನಿಸಲಾಗುತ್ತಿದೆ. ಯಾರೆಲ್ಲಾ ಸುಳ್ಳು ಸುದ್ದಿ ಹಬ್ಬಿಸಿದ್ದಾರೋ ಅವರ ವಿರುದ್ದವೂ ಕ್ರಮ ಆಗಲಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು. : - - - – - - .