ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಮಂದಿಗೆ ಗಾಯ…. ಹೈದರಾಬಾದ್,ನ,11,2019(..): ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ಹೈದರಾಬಾದ್ ನ ಕಾಚಿಗುಡ ಎಂಎಂಟಿಎಸ್ ಬಳಿ ನಡೆದಿದೆ. ಕಾಚಿಗುಡದ ನಿಂಬೋಳಿ ಅಡ್ಡದ ಬಳಿ ಇಂಟರ್‌ಸಿಟಿ ಹಾಗೂ ಎಎಂಟಿಎಸ್ ರೈಲು ನಡುವೆ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ಎರಡು ರೈಲುಗಳು ಒಂದೇ ಟ್ರ್ಯಾಕ್ ನಲ್ಲಿ ಚಲಿಸಿ ಮುಖಾಮುಖಿ ಡಿಕ್ಕಿ ಹೊಡೆದಿವೆ ಎನ್ನಲಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. : –- - 20 -