ಮೈಸೂರಿನಲ್ಲಿ ಭೀಕರ ಅಪಘಾತ: ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವು…. ಮೈಸೂರು,ನ,8,2019(..): ಖಾಸಗಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೊರವಲಯದ ಮೈಸೂರು- ಟಿ.ನರಸೀಪುರ ರಸ್ತೆಯ ವರಕೋಡು ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರೆಲ್ಲರೂ ಬೆಂಗಳೂರು ಮೂಲದವರಾಗಿದ್ದು ಗೃಹ ಪ್ರವೇಶ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಕುರಿತು ವರುಙಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : –- - -