ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು… ಮೈಸೂರು,ನ,5,2019(..): ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹೆಚ್‌‌.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ಈ ಘಟನೆ‌ ನಡೆದಿದೆ. ಗ್ರಾಮದ ದೇವರಾಜು (60) ಮೃತಪಟ್ಟ ರೈತ‌. ರೈತ ದೇವರಾಜುಸುಮಾರು 3 ಎಕರೆ ಕೃಷಿ ಭೂಮಿ ಹೊಂದಿದ್ದರು. ಜಮೀನಿನಲ್ಲಿ ಮೂರು ಕೋಳವೆ ಬಾವಿ ಕೊರೆಸಿದ್ದರು. ಆದರೆ ಕೊಳವೆ ಬಾವಿಯಲ್ಲಿ ನೀರು ಬಾರದ ಹಿನ್ನಲೆ ಬೆಳೆ ಕೈಕೊಟ್ಟಿತ್ತು. ಶುಂಠಿ ಬೆಳೆ ಬೆಳೆಯಲು ರೈತ ದೇವರಾಜ ಸುಮಾರು 6 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು. ಆದರೆ ಸಾಲಗಾರರ ಕಿರುಕುಳ ಹೆಚ್ಚಾದ ಹಿನ್ನಲೆ ದೇವರಾಜು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- -