ರಾಜ್ಯಸಭೆ ಚುನಾವಣೆ: ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡಮತದಾನ. ಬೆಂಗಳೂರು,ಫೆಬ್ರವರಿ 27,2024(..):ಇಂದು ರಾಜ್ಯಸಭೆ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಮತದಾನ ಮಾಡುವ ಮೂಲಕ ಬಿಜೆಪಿಗೆ ಶಾಕ್‌ ನೀಡಿದ್ದಾರೆ. ಇನ್ನೂ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ ರೊಬ್ಬರು ಖಚಿತಪಡಿಸಿದ್ದಾರೆ ಎನ್ನಲಾಗಿದೆ. : - - - - .