ತುಮಕೂರಿನಲ್ಲಿ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ: ಮೂವರು ದುರ್ಮರಣ.. ತುಮಕೂರು ,ನ,3,2019(..): ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಹೊರ ವಲಯದ ಊರುಕೆರೆ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಖಾಸಗಿ ಬಸ್ ಚಾಲಕರು , ಓವ೯ ಪ್ರಯಾಣಿಕ ಸಾವನ್ನಪ್ಪಿದ್ದಾರೆ. 20 ಪ್ರಯಾಣಿಕರಿಗೆ ಗಾಯ ಐವರು ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಬೂಬು ಲಾರಿ ಚಾಲಕನ ಎಡವಟ್ಟು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಖಾಸಗಿ ಬಸ್ ಹಾಗೂ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಸೋಪ್ ತುಂಬಿದ ಲಾರಿ ಪಲ್ಟಿಯಾಗಿದೆ. ಶಿರಾ ಕಡೆಯಿಂದ ತುಮಕೂರು ಕಡೆಗೆ ಖಾಸಗಿ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - - - – -