ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ: ಹೊತ್ತಿ ಉರಿದ ಬಟ್ಟೆ ಅಂಗಡಿ… ಮೈಸೂರು,ನ,2,2019(..): ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಬಟ್ಟೆ ಅಂಗಡಿ ಹೊತ್ತಿ ಉರಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಬ್ಬಾಳು ಸೂರ್ಯಬೇಕರಿ ವೃತ್ತ ಸಮೀಪ ಈ ಘಟನೆ ನಡೆದಿದೆ. ನ್ಯೂ ಬಾಂಬೆ ಬಜಾರ್ ಹೆಸರಿನ ತಾತ್ಕಾಲಿಕ ಜವಳಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 11 ಗಂಟೆ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆಯೇ ಸಾವಿರಾರು ರೂ. ಮೌಲ್ಯದ ಬಟ್ಟೆಗಳು ಸುಟ್ಟು ಹೋಗಿವೆ. ಇನ್ನು ವಸ್ತುಗಳನ್ನು ರಕ್ಷಿಸಿಕೊಳ್ಳಲು ಅಂಗಡಿಯವರು ಹರಸಾಹಸ ಪಟ್ಟರು. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಆಗಮಿಸಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿದರು. ಇದೇ ವೇಳೆ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ಹರಡದಂತೆ ಕ್ರಮ ವಹಿಸಿದರು. ಬೆಂಕಿ ಅವಘಡ ಕಂಡು ಸ್ಥಳೀಯರು ಆತಂಕಗೊಂಡರು. : - - -