ಬಿಜೆಪಿ ಸರ್ಕಾರದ ನೂರು ದಿನಗಳ ಸಾಧನೆ ಬಗ್ಗೆ ಚರ್ಚೆಗೆ ಸಿದ್ಧ- ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಚಿವ ಶ್ರೀರಾಮುಲು ಸವಾಲು…. ರಾಯಚೂರು,ನ,1,2019(..): ರಾಜ್ಯ ಬಿಜೆಪಿ ಸರ್ಕಾರದ ನೂರು ದಿನಗಳ ಸಾಧನೆ ಶೂನ್ಯ ಎಂದು ಟೀಕಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ಬಿಜೆಪಿ ಸರ್ಕಾರದ ನೂರು ದಿನಗಳ ಸಾಧನೆಯ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ ಬನ್ನಿ ಚರ್ಚೆ ಮಾಡೋಣ ಎಂದು ಸಚಿವ ಶ್ರೀರಾಮುಲು ಸಿದ್ಧರಾಮಯ್ಯಗೆ ಸವಾಲು ಹಾಕಿದ್ದಾರೆ. ರಾಯಚೂರಿನಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು, ಸಿದ್ಧರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿಗೆ ತಂದು ಜನರಿಗೆ ಅನ್ನಕೊಟ್ಟೆ ಎಂದು ಹೇಳುತ್ತಿದ್ದಾರೆ. ಆದರೆ ಅನ್ನಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿತ್ತು. ಸಿದ್ಧರಾಮಯ್ಯ ಪುತ್ರ ಲ್ಯಾಬ್ ಹಗರಣದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಏಕೆ ತನಿಖೆ ನಡೆಸಲಿಲ್ಲ ಎಂದು ಪ್ರಶ್ನಿಸಿದರು. ಇದೇ ವೇಳೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟ ಸಚಿವ ಶ್ರೀರಾಮುಲು, ಬಿಜೆಪಿ ನಾಯಕರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಟೀಕಿಸುತ್ತಿದ್ದ ಡಿ.ಕೆ ಶಿವಕುಮಾರ್ ಈಗ ತಾವೇ ಜೈಲಿಗೆ ಹೋಗಿ ಬಂದಿದ್ದಾರೆ. ಬೇರೆಯವರ ಬಗ್ಗೆ ಮಾತನಾಡುವ ನೈತಿಕತೆ ಡಿ.ಕೆ ಶಿವಕುಮಾರ್ ಗೆ ಇಲ್ಲ ಎಂದು ಲೇವಡಿ ಮಾಡಿದರು. : – ’- 100 – - - - .