ಜೆಡಿಎಸ್ ಗೆ ಶಾಕ್: ಪಕ್ಷ ಬಿಡಲು ತೀರ್ಮಾನಿಸಿದ್ದೇನೆ ಎಂದ ಪರಿಷತ್ ಸದಸ್ಯ… ರಾಮನಗರ, ಅ,30,2019(..): ಜೆಡಿಎಸ್ ಪಕ್ಷವನ್ನ ಬಿಡಲು ತೀರ್ಮಾನಿಸಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ಎಂಎಲ್ ಸಿ ಪುಟ್ಟಣ್ಣ , ‘ತೆನೆ’ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ. ಈ ಬಗ್ಗೆ ಇಂದು ರಾಮನಗರದಲ್ಲಿ ಮಾತನಾಡಿದ ಜೆಡಿಎಸ್ ಪರಿಷತ್ ಸದಸ್ಯ ಪುಟ್ಟಣ್ಣ, ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನಿಸಿದ್ಧೇನೆ. ಮುಂದಿನ ದಿನಗಳಲ್ಲಿ ಈ ಕುರಿತು ಅಧಿಕೃತವಾಗಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹಾಗೆಯೇ ಜೆಡಿಎಸ್ ನ ಬಹುತೇಕ್ ವಿಧಾನ ಪರಿಷತ್ ಸದಸ್ಯರು ಇದೇ ತೀರ್ಮಾನಕ್ಕೆ ಬಂದಿದ್ದಾರೆ. ಆದರೆ ಈಗಲೇ ಎಲ್ಲವನ್ನು ಹೇಳಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸ್ಪಷ್ಟಪಡಿಸಲಾಗುತ್ತದೆ. ಎಂದು ಎಂಎಲ್ ಸಿ ಪುಟ್ಟಣ ತಿಳಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿರುವ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. : – – - -