ಡಿಕೆ ಶಿವಕುಮಾರ್ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ತಾತ್ಕಾಲಿಕ ರಿಲೀಫ್: ಅರ್ಜಿ ವಿಚಾರಣೆ ಮುಂದೂಡಿಕೆ…. ನವದೆಹಲಿ,ಅ,30,2019(..): ಇಡಿ ಸಮನ್ಸ್ ನೀಡಿರುವ ವಿಚಾರ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ದೆಹಲಿ ಹೈಕೋರ್ಟ್ ನವೆಂಬರ್ 4ಕ್ಕೆ ಮುಂದೂಡಿದೆ. ಈ ಮೂಲಕ ಡಿಕೆ ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಪತ್ನಿ ಮತ್ತು ತಾಯಿಗೂ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಸಮನ್ಸ್ ರದ್ದು ಮಾಡಬೇಕು ಮತ್ತು ಬೆಂಗಳೂರಿನಲ್ಲಿ ವಿಚಾರಣೆ ನಡೆಸುವಂತೆ ಕೋರಿ ಡಿ.ಕೆ ಶಿವಕುಮಾರ್ ತಾಯಿ ಮತ್ತು ಪತ್ನಿ ನವದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನ ದೆಹಲಿ ಹೈಕೋರ್ಟ್ ನವೆಂಬರ್ 4ಕ್ಕೆ ಮುಂದೂಡಿದೆ. : - – – - -