ಭೀಕರ ಅಪಘಾತ: ದಂಪತಿ, ಮಗು ದುರ್ಮರಣ ಚಾಮರಾಜನಗರ, ಸೆಪ್ಟಂಬರ್,18,2024 (..):ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ದಂಪತಿ, ಮಗು ಮೂವರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಕೇರಳಾದ ವೈನಾಡಿನ ಪತಿ ದಾನೇಶ್(37) ಪತ್ನಿ ಅಂಜು(27) ಮಗ ಇಶಾನ್ ಕೃಷ್ಣ(7) ಮೃತರು ಎಂದು ಗುರುತಿಸಲಾಗಿದೆ. ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದಂಪತಿ ಮಗ ಮೂವರು ಒಂದೇ ಬೈಕ್ ನಲ್ಲಿ ಕೇರಳದಿಂದ ಗುಂಡ್ಲುಪೇಟೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕೂತನೂರು ಗುಡ್ಡದಿಂದ ಮಣ್ಣು ತುಂಬಿಕೊಂಡು ಬರುತ್ತಿ ಕೆ.ಎ.11-ಬಿ 8497 ನೋಂದಣಿಯ ಟಿಪ್ಪರ್ ಬೈಕ್ ಗೆ ಹಿಂಬದಿಯಿಂದ ಗುದ್ದಿದೆ. ಅಪಘಾತದ ರಬಸಕ್ಕೆ ದೇಹಗಳು ಛಿದ್ರ ಛಿದ್ರವಾಗಿದೆ. ಟೈಯರ್ ಗೆ ಸಿಲುಕಿದ ದೇಹಗಳನ್ನು ಟಿಪ್ಪರ್ ಸುಮಾರು 200 ಮೀಟರ್ ದೂರ ಎಳೆದೊಯ್ದಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಕುಡಿದ ಮತ್ತಿನಲ್ಲಿ ಚಾಲಕ ಟಿಪ್ಪರ್ ಚಾಲನೆ ಮಾಡಿದ್ದಾನೆ ಎನ್ನಲಾಗಿದ್ದು, ಸ್ಥಳಕ್ಕೆ ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಚಾಲಕನನ್ನು ಬಂಧಿಸಿದ್ದಾರೆ. : , , ,