ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವು… ತುಮಕೂರು,ಅ,30,2019(..): ಖಾಸಗಿ ಬಸ್ ಪಲ್ಟಿಯಾಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ 9 ಗಂಟೆ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿಜಯಲಕ್ಷ್ಮಿ ಖಾಸಗಿ ಬಸ್ ಪಲ್ಟಿಯಾಗಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ನಲ್ಲಿ ಐವತ್ತಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೊರಟಗೆರೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - 6 -- -