ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ: ಡಿಕೆ ಶಿವಕುಮಾರ್ ಗೆ ಅದ್ಧೂರಿ ಸ್ವಾಗತದ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ…? ಹುಬ್ಬಳ್ಳಿ,ಅ,26,2019(..): ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅದ್ದೂರಿ ಮೆರವಣಿಗೆ ಮೂಲಕ ಸ್ವಾಗತ ಕೋರಲು ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಸಜ್ಜಾಗಿದ್ದಾರೆ. ಈ ನಡುವೆ ಡಿ.ಕೆ ಶಿವಕುಮಾರ್ ಸ್ವಾಗತ ಸಮಾರಂಭದಿಂದ ವಿಪಕ್ಷ ನಾಯಕ ಸಿದ್ಧರಾಮಯ್ಯ ದೂರು ಉಳಿದಿದ್ದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರನ್ನ ಪಕ್ಷ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಪ್ರಕಾರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಊಹಾಪೋಹದ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ ಎಂದು ತಿಳಿಸಿದರು. : – -- -