ಅನರ್ಹ ಶಾಸಕರು ರಾಜೀನಾಮೆ ನೀಡಿಲ್ಲ ಅಂದಿದ್ರೆ ಡಿಸಿಎಂ ಆಗುತ್ತಿರಲಿಲ್ಲ- ಲಕ್ಷ್ಮಣ್ ಸವದಿಗೆ ಟಾಂಗ್ ಕೊಟ್ಟ ಬಿಜೆಪಿ ಶಾಸಕ ಉಮೇಶ್ ಕತ್ತಿ… ಬೆಳಗಾವಿ,ಅ,25,2019(..): ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಟಾಂಗ್ ನೀಡಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ, ಅನರ್ಹ ಶಾಸಕರು ರಾಜೀನಾಮೆ ನೀಡಿಲ್ಲ ಅಂದಿದ್ರೆ ಡಿಸಿಎಂ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಮಾತನಾಡಿದ ಶಾಸಕ ಉಮೇಶ್ ಕತ್ತಿ, ಡಿಸಿಎಂ ಸ್ಥಾನ ಸಾಂವಿಧಾನಿಕ ಹುದ್ದೆಯಲ್ಲ. ಅಶ್ವಥ್ ನಾರಾಯಣ್, ಲಕ್ಷ್ಮಣ್ ಸವದಿ, ಗೋವಿಂದ ಕಾರಜೋಳ, ಇವರಿಗೆ ನಾಯಕರಾಗುವ ಯೋಗ್ಯತೆ ಇಲ್ಲ. ಇವರ್ಯಾರಿಗೂ ಸಾಮರ್ಥ್ಯ ಇಲ್ಲ. ಬಿಜೆಪಿಯಲ್ಲಿ ಸೋತವರಿಗೆ ಡಿಸಿಎಂ ಮಾಡಲಾಗಿದೆ ಎಂದು ತಿಳಿಸಿದರು. ಅನರ್ಹ ಶಾಸಕರಿಗೆ ಟಿಕೆಟ್ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಆದರೂ ಸೋತಿರುವ ರಾಜುಕಾಗೆ, ಲಕ್ಷ್ಮಣ್ ಸವದಿ, ಅಶೋಕ್ ಪೂಜಾರಿ ನಮ್ಮ ಅಭ್ಯರ್ಥಿಗಳು ಎಂದು ಉಮೇಶ್ ಕತ್ತಿ ತಿಳಿಸಿದರು. : – - –