ಟಾಟಾಏಸ್ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಸಾವು: ಇಬ್ಬರಿಗೆ ಗಾಯ… ಗದಗ,ಅ,25,2019(..): ಟಾಟಾ ಏಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನಲ್ಲಿ ನಡೆದಿದೆ. ಶಿರಹಟ್ಟಿಯ ಕಡಕೋಳದಲ್ಲಿ ಈ ಘಟನೆ ನಡೆದಿದೆ. ಮೃತ್ಯುಂಜಯ(47), ಮೃತಪಟ್ಟ ಬೈಕ್ ಸವಾರ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಶಿರಹಟ್ಟಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- –- -