ಡಿ.ಕೆ ಶಿವಕುಮಾರ್ ಬಿಡುಗಡೆಯಿಂದ ಕಾಂಗ್ರೆಸ್ ಗೆ ಬಲ ಹೆಚ್ಚಿದೆ- ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್… ನವದೆಹಲಿ,ಅ,24,2019(..): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜೈಲಿನಿಂದ ಬಿಡುಗಡೆಯಾಗಿದ್ದು ಕಾಂಗ್ರೆಸ್ ಗೆ ಬಲ ಹೆಚ್ಚಿದಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ತಿಳಿಸಿದರು. ನಿನ್ನೆ ದೆಹಲಿಯ ಹೈಕೋರ್ಟ್ ನಿಂದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಿತ್ತು. ಜಾಮೀನು ಪಡೆದು ನಿನ್ನೆ ರಾತ್ರಿ ಡಿ.ಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆಯಾದರು. ಈ ನಡುವೆ ಇಂದು ನವದೆಹಲಿಯಲ್ಲಿರುವ ಎಐಸಿಸಿ ಕಚೇರಿಗೆ ತೆರಳಿದ ಮಾಜಿ ಸಚಿವ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ರನ್ನ ಭೇಟಿಯಾದರು. ಪಕ್ಷದ ಕಚೇರಿಗೆ ಬಂದ ಡಿ.ಕೆ ಶಿವಕುಮಾರ್ ಅವರನ್ನ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆತ್ಮೀಯವಾಗಿ ತಬ್ಬಿಕೊಂಡು ಸ್ವಾಗತ ಕೋರಿದರು. ನಂತರ ಇಬ್ಬರು ನಾಯಕರು ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿದ ಕೆ.ಸಿ ವೇಣುಗೋಪಾಲ್, ಡಿಕೆ ಶಿವಕುಮಾರ್ ಬಿಡುಗಡೆಯಿಂದಾಗಿ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬಂದಂತಾಗಿದೆ. ಇದರಿಂದ ರಾಜ್ಯದಲ್ಲಿ ನಡೆಯುವ ಉಪಚುನಾವಣೆಗೂ ಸಹಾಯವಾಗಲಿದೆ. ಡಿ.ಕೆ ಶಿವಕುಮಾರ್ ದೊಡ್ಡ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಗುಣಗಾನ ಮಾಡಿದರು. : – – – –