ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವು…. ಚಿತ್ರದುರ್ಗ,ಅ,23,2019(..): ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಅವಾಂತರ ಸೃಷ್ಠಿಸಿದ್ದು ಈ ನಡುವೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ದೆ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ ಈ ಘಟನೆ ನಡೆದಿದೆ. ವೃದ್ಧೆ ಬುಡನ್ ಬಿ(80) ಮೃತಪಟ್ಟವರು. ಚಿತ್ರದುರ್ಗ ಜಿಲ್ಲೆಯಾದ್ಯಾಂತ ಭಾರಿ ಮಳೆಯಾಗುತ್ತಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದು ಮೃದ್ದೆ ಮೃತಪಟ್ಟಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. : - – -