ವಿಭಿನ್ನ ಪೋಷಾಕಿನಲ್ಲಿ ನಿರೀಕ್ಷೆ ಹೆಚ್ಚಿಸಿದ ರಾಧಿಕಾ ಕುಮಾರಸ್ವಾಮಿ: ದಮಯಂತಿ ಪೋಸ್ಟರ್ ಬಿಡುಗಡೆ: ಚಿತ್ರತಂಡಕ್ಕೆ ಅಭಯ ನೀಡಿದ ಮೋಹನ್​ ಲಾಲ್​… ಬೆಂಗಳೂರು,ಅ,19,2019(..): ಬಹಳ ವರ್ಷಗಳ ನಂತರ ರಾಧಿಕಾ ವಿಭಿನ್ನ ಲುಕ್​ ನಲ್ಲಿ ಪ್ರೇಕ್ಷಕರೆದುರು ಬರುತ್ತಿದ್ದಾರೆ. ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ಬಹು ನಿರೀಕ್ಷಿತ ದಮಯಂತಿ ಚಿತ್ರದ ಮಲಯಾಳಂ ಆವೃತ್ತಿಯ ದಮಯಂತಿ ಪೋಸ್ಟರ್​ ಗುರುವಾರ, ಅ.17 ರಂದು ಬಿಡುಗಡೆಯಾಗಿದೆ. ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್​ ಲಾಲ್​ ಪೋಸ್ಟರ್​ ಬಿಡುಗಡೆಗೊಳಿಸಿದ್ದಾರೆ. ರಾಧಿಕಾ ಪೋಸ್ಟರ್​ ನಲ್ಲಿ ಖಡಕ್​ ಲುಕ್​ ನಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಬಗ್ಗೆ ಭರವಸೆ ಮೂಡಿಸಿದ್ದಾರೆ. ಅ.7 ರಂದು ನಟಿ ರಾಧಿಕಾರ ದಮಯಂತಿ ಚಿತ್ರದ 2 ನೇ ಲುಕ್​ ಬಿಡುಗಡೆಯಾಗಿತ್ತು. ದಸರಾ ಹಿನ್ನೆಲೆಯಲ್ಲಿ ಚಿತ್ರದ ಸೆಕೆಡ್ ಲುಕ್ ನ್ನು ರಿಲೀಸ್ ಮಾಡಲಾಗಿತ್ತು, ದಮಯಂತಿ ಟೀಸರ್​ ನ ಕನ್ನಡ ಆವೃತ್ತಿ ಸೆ.20 ರಂದು ಬಿಡುಗಡೆಯಾಗಿತ್ತು. ಅರಮನೆಯೊಂದರಲ್ಲಿ ರಾತ್ರಿಯ ವೇಳೆ ಕೆಂಪು ಸೀರೆಯನ್ನು ಧರಿಸಿದ ರಾಣಿಯ ಅವತಾರದಲ್ಲಿ ಕಾಣುವ ರಾಧಿಕಾ ಸಿಂಹಾಸನದ ಮೇಲೆ ಕುಳಿತುಕೊಂಡು ಗಂಭೀರ ನೋಟ ಬೀರುವುದನ್ನು ನಾವು ಟೀಸರ್​ ನಲ್ಲಿ ಕಾಣುತ್ತೇವೆ. ಚಿತ್ರದಲ್ಲಿ ರಾಧಿಕಾ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಭಜರಂಗಿ ಖ್ಯಾತಿಯ ಲೋಕಿ, ಸಾಧು ಕೋಕಿಲ, ತಬಲಾ ನಾಣಿ, ಮಿತ್ರ, ಮಜಾ ಟಾಕೀಸ್​ ನ ಪವನ್​ ಮತ್ತು ಇತರರನ್ನು ಒಳಗೊಂಡಿದೆ. ಚಿತ್ರವನ್ನು ನವರಸನ್​ ನಿರ್ದೇಶನ ಮಾಡಿದ್ದಾರೆ. ಅಲ್ಲದೆ ಕಥೆ ಮತ್ತು ಚಿತ್ರಕಥೆಯನ್ನೂ ಬರೆದಿದ್ದಾರೆ. ಅಲ್ಲದೆ ಚಿತ್ರಕ್ಕೆ ಬಂಡವಾಳವನ್ನೂ ಹೂಡಿದ್ದಾರೆ. ಶ್ರೀ ಲಕ್ಷ್ಮಿ ವೃಶಾದ್ರಿ ಪ್ರೊಡೊಕ್ಷನ್​ ಸಂಸ್ಥೆ ನಿರ್ಮಾಣ ಮಾಡಿದೆ. ಆರ್​ ಎಸ್​ ಗಣೇಶ್​ ನಾರಾಯಣ್​ ಸಂಗೀತ ಸಂಯೋಜನೆ ಮಾಡಿದ್ದಾರೆ. ಪಿ ಕೆ ಎಚ್​ ದಾಸ್​ ಅವರ ಕ್ಯಾಮರಾ ಕೈಚಳಕ ಇದೆ. ಚಿತ್ರವು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂಗಳಲ್ಲಿ ತೆರೆಗೆ ಅಪ್ಪಳಿಸಲಿದೆ. ದಮಯಂತಿ ಭಯಾನಕ, ಕುತೂಹಲಕಾರಿ ಮತ್ತು ಹಾಸ್ಯ ಭರಿತ ಚಿತ್ರವಾಗಿದೆ. ಇದು 80 ರ ದಶಕದ ಚಿತ್ರವಾಗಿದೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ತನ್ನ ತಂದೆಯ ನಂತರದಲ್ಲಿ ಮಗಳು ಹೇಗೆ ರಾಜ್ಯಭಾರ ಮಾಡುತ್ತಾಳೆ ಎಂಬ ಕಥೆಯನ್ನು ಚಿತ್ರ ಒಳಗೊಂಡಿದೆ. : - - – -