ನಮ್ಮ ರಾಜಕಾರಣಕ್ಕೆ ತಾಯಿ ಸನ್ನಿಧಾನ ಬಳಸಿಕೊಂಡಿದ್ದು ತಪ್ಪು-ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಕ್ಷಮೆಯಾಚಿಸಿದ ಮಾಜಿ ಸಚಿವ ಸಾ.ರಾ ಮಹೇಶ್….. ಮೈಸೂರು,ಅ,18,2019(..): ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಆಣೆ ಪ್ರಮಾಣದ ಹೈಡ್ರಾಮಾ ಕುರಿತು ಮಾಜಿ ಸಚಿವ ಸಾ.ರಾ ಮಹೇಶ್ ತಾಯಿ ಚಾಮುಂಡೇಶ್ವರಿ ಬಳಿ ಕ್ಷಮೆ ಕೋರಿದ್ದಾರೆ. ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಮಾಜಿ ಸಚಿವ ಸಾ.ರಾ ಮಹೇಶ್ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ನಿನ್ನೆ ನಡೆದ ಘಟನೆ ಬಗ್ಗೆ ಕ್ಷಮೆ ಕೋರಿದರು. ಬಳಿಕ ಮಾತನಾಡಿದ ಮಾಜಿ ಸಚಿವ ಸಾ.ರಾ ಮಹೇಶ್, ನಮ್ಮ ರಾಜಕಾರಣಕ್ಕೆ ತಾಯಿ ಸನ್ನಿಧಾನ ಬಳಸಿಕೊಂಡಿದ್ದು ತಪ್ಪು. ನಮ್ಮ ವೈಯಕ್ತಿಕ ವಿಚಾರಗಳಿಗೆ ತಾಯಿ ಸನ್ನಿಧಾನ ಬಳಸಿಕೊಂಡಿದ್ದಕ್ಕೆ ತಾಯಿ ಚಾಮುಂಡೇಶ್ವರಿ ಮತ್ತು ನಾಡಿನ ಜನತೆ ಬಳಿ ಕ್ಷಮೆ ಕೋರುತ್ತೇನೆ. ನನ್ನನ್ನ ಕ್ಷಮಿಸು ಎಂದು ತಾಯಿ ಬಳಿ ಪ್ರಾರ್ಥಿಸಿದ್ದೇನೆ ಎಂದರು. : - - – -