ಮಹಾರಾಷ್ಟ್ರಕ್ಕೆ ತೆರಳಿದ ಮಾಜಿ ಸಿಎಂ ಸಿದ್ಧರಾಮಯ್ಯ… ಹುಬ್ಬಳ್ಳಿ,ಅ,17,2019(..): ನವದೆಹಲಿಗೆ ಭೇಟಿ ನೀಡಿ ನಿನ್ನೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿ ಚರ್ಚೆ ನಡೆಸಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಈ ನಡುವೆ ರಾಜ್ಯ ಬಿಜೆಪಿ ನಾಯಕರೂ ಮಹಾರಾಷ್ಟ್ರಕ್ಕೆ ತೆರಳಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಮಾಜಿ ಸಿಎಂ ಸಿದ್ಧರಾಮಯ್ಯ ಸಹ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲು ಮಹಾರಾಷ್ಟ್ರಕ್ಕೆ ಹಾರಿದ್ದಾರೆ. ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದ್ದಾರೆ. ಸಾಂಗ್ಲಿಯಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗುತ್ತಿದೆ. : – - -