ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿಗೆ ನೀಡಿದ್ದ ಸಮನ್ಸ್ ಗೆರ ತಾತ್ಕಾಲಿಕ ತಡೆ ನೀಡಿದ ದೆಹಲಿ ಹೈಕೋರ್ಟ್… ನವದೆಹಲಿ,ಅ,16,2019(..): ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮಗೆ ಇಡಿ ಅಧಿಕಾರಿಗಳು ನೀಡಿದ್ದ ಸಮನ್ಸ್ ಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೀಡಿದ್ದ ಸಮನ್ಸ್ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇಡಿ ನೀಡಿದ್ದ ಸಮನ್ಸ್ ಗೆ ತಾತ್ಕಾಲಿಕ ತಡೆ ನೀಡಿದೆ. ಇನ್ನು ನಾಳೆ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ. 10 ದಿನಗಳ ಬಳಿಕ ಸಮನ್ಸ್ ನೀಡುವಂತೆ ಇಡಿ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮಗೆ ಹೊಸ ಸಮನ್ಸ್ ಜಾರಿ ಮಾಡಲಿದ್ದಾರೆ. : - – – – - - .