ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟ ಕಡ್ಡಾಯಕ್ಕೆ ತೀರ್ಮಾನ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್. ಬೆಂಗಳೂರು, ಫೆಬ್ರವರಿ ,22,2024(..):ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸುವುದನ್ನ ಕಡ್ಡಾಯ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ದರಪಟ್ಟಿ ಪ್ರಕಟಿಸಬೇಕು. ದರ ಪಟ್ಟಿ ಪ್ರಕಟಿಸದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುವುದು ಎಂದು ತಿಳಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಎಂಬ ಬಗ್ಗೆ ಅನೇಕ ದೂರುಗಳು ಬಂದ ಬೆನ್ನಲ್ಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. : – - –- – - .