ಭೀಕರ ರಸ್ತೆ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು. ಬೆಳಗಾವಿ,ಫೆಬ್ರವರಿ,22,2024(..):ಮದುವೆ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದ ವೇಳೆ ಕಾರು ಮರಕ್ಕೆ ಹೊಡೆದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರದ ನಂಧಗಡ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರು ಮಹಾರಾಷ್ಟ್ರ ಮೂಲದವರು ಎನ್ನಲಾಗುತ್ತಿದೆ. ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಊರಿನ ವಾಪಸ್ ಆಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಕಾರಿನಲ್ಲಿ ಒಂಬತ್ತು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಘಟನ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : - –- 6 - -