ಚಿತ್ರದುರ್ಗದ ಗಂಡುಗಲಿ ಆಗಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ! ಬೆಂಗಳೂರು, ಅಕ್ಟೋಬರ್ 16, 2019 (..):ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಂದು ಐತಿಹಾಸಿಕ ಸಿನಿಮಾ ಮಾಡಲಿದ್ದಾರೆ. ಹೌದು, ಮತ್ತೊಮ್ಮೆ ಐತಿಹಾಸಿಕ ಚಿತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ ದಚ್ಚು. ಚಿತ್ರದುರ್ಗದ ಗಂಡುಗಲಿ ಮದಕರಿ ನಾಯಕನ ಜೀವನ ಚರಿತ್ರೆ ಆಧಾರಿತ ಸಿನಿಮಾ ಇದಾಗಿದೆ. ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್ ಬಾಬು ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ರಾಕ್ಲೈನ್ ವೆಂಕಟೇಶ್ ಈ ಸಿನಿಮಾವನ್ನು ನಿರ್ಮಿಸಲಿದ್ದಾರೆ. ರಾಬರ್ಟ್ ಬಿಡುಗಡೆಗೂ ಮುನ್ನ ಈ ಸಿನಿಮಾ ಸೆಟ್ಟೇರಲಿದೆ.