ಗುಲ್ಬರ್ಗಾ ವಿವಿಯಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಅನುಮತಿ.. ಕಲಬುರಗಿ,ಅ,14,2019(..) ನಾಳೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆಯಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಮಾಜಿ ಅಧ್ಯಕ್ಷ, ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿದೆ. ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದೆಂದು ಶ್ರೀರಾಮಸೇನೆ ಸೇರಿ ಕೆಲ ಸಂಘಟನೆಗಳು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ಇಂದು ಸಿಂಡಿಕೇಟ್ ಸಭೆಯನ್ನು ಕರೆಯಲಾಗಿತ್ತು‌. ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಗುಲಬರ್ಗಾ ವಿವಿ ಹಂಗಾಮಿ ಕುಲಪತಿ ಪ್ರೊ.ಪರಿಮಳ ಅಂಬೇಕರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಇನ್ನು ಕನ್ಹಯ್ಯ ಕುಮಾರ್ ಉಪನ್ಯಾಸ ಕಾರ್ಯಕ್ರಮಕ್ಕೆ ಸಿಂಡಿಕೇಟ್ ಸಭೆ ಒಪ್ಪಿಗೆ ನೀಡಿದ್ದಾಗಿ ಪ್ರೊ.ಪರಿಮಳ ಅಂಬೇಕರ್ ಧರಣಿನಿರತ ವಿದ್ಯಾರ್ಥಿಗಳಿಗೆ ತಿಳಿಸಿದ್ದು ನಾಳೆ ಕನ್ಹಯ್ಯ ಕುಮಾರ್ ಕಾರ್ಯಕ್ರಮ ನಿಗದಿ ಯಂತೆ ನಡೆಯಲಿದೆ‌. : – - – .