ಕೆಲವೇ ಕ್ಷಣಗಳಲ್ಲಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ…. ನವದೆಹಲಿ,ಅ,14,2019(..): ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನವದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಕೆಲವೇ ಕ್ಷಣಗಳಲ್ಲಿ ಡಿ.ಕೆ ಶಿವಕುಮಾರ್ ಅರ್ಜಿ ವಿಚಾರಣೆ ಆರಂಭವಾಗಲಿದೆ. ಈಗಾಗಲೇ ಕೋರ್ಟ್ ಗೆ ನ್ಯಾಯಮೂರ್ತಿ ಸುರೇಶ್ ಕುಮಾರ್ ಆಗಮಿಸಿದ್ದಾರೆ. ಆದರೆ ಇಡಿ ಮತ್ತು ಡಿ.ಕೆ ಶಿವಕುಮಾರ್ ಪರ ವಕೀಲರು ಇಂದೂ ಕೋರ್ಟ್ ಗೆ ಇನ್ನು ಹಾಜರಾಗಿಲ್ಲ. ಇನ್ನು ಡಿ.ಕೆ ಶಿವಕುಮಾರ್ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ, ದಯಾ ಕೃಷ್ಣನ್ ವಾದ ಮಂಡಿಸಲಿದ್ದಾರೆ. ಇಂದು ಬೇಲ್ ಸಿಕ್ಕರೆ ಡಿ.ಕೆ ಶಿವಕುಮಾರ್ ಬಿಡುಗಡೆಯಾಗಲಿದ್ದಾರೆ. : - - –-