ಚುನಾವಣೆಗೆ ಸಿದ್ಧರಾಗುವಂತೆ ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ… ಬೆಂಗಳೂರು,ಅ,12,2019(..): ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಪತನವಾಗುತ್ತೆ. ಹೀಗಾಗಿ ಚುನಾವಣೆಗೆ ಸಿದ್ಧರಾಗಿರಿ ಎಂದು ಸಿಎಲ್ ಪಿ ನಾಯಕ ಸಿದ್ಧರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ಕಾಂಗ್ರೆಸ್ ಶಾಸಕರ ಜತೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಅನೌಪಚಾರಿಕ ಸಭೆ ನಡೆಸಿದರು. ಸಭೆಯಲ್ಲಿ ತಮ್ಮ ಶಾಸಕರಿಗೆ ಈ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ. ಹೀಗಾಗಿ ಮುಂದಿನ ವರ್ಷಕ್ಕೆ ಚುನಾವಣೆಗೆ ಸಿದ್ಧರಾಗಿರಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ಬಿಜೆಪಿ ಸರ್ಕಾರ ಒಂದು ವರ್ಷವಿದ್ದರೇ ಕಾಂಗ್ರೆಸ್ ಗೆ ಲಾಭವಾಗುತ್ತಿತ್ತು. ಸರ್ಕಾರದ ವೈಪಲ್ಯಗಳನ್ನ ಕಾಂಗ್ರೆಸ್ ಎತ್ತಿ ಹಿಡಿಯಬಹುದಿತ್ತು. ಆದರೆ ಸರ್ಕಾರ ಒಂದು ವರ್ಷ ಪೂರೈಸುವುದೇ ಅನುಮಾನವಾಗಿದೆ ಎಂದು ಸಭೆಯಲ್ಲಿ ಸಿದ್ಧರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. : – - - - – –