ಚಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ: ಆರು ಮಂದಿ ಅಪಾಯದಿಂದ ಪಾರು… ರಾಮನಗರ,ಅ,9,2019(..): ಚಲಿಸುತ್ತಿದ್ದ ಕಾರಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಭಸ್ಮವಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಶಾಂತಿನಿಕೇತನ ಕಾಲೇಜು ಮುಂಭಾಗ ಈ ಘಟನೆ ನಡೆದಿದೆ. ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆರು ಮಂದಿ ಕಾರಿನಲ್ಲಿ ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಈ ಕುರಿತು ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : - – - - -.