ಜಮೀನಿಗೆ ಹೋಗುತ್ತಿದ್ದ ವೇಳೆ ಹುಲಿ ದಾಳಿಗೆ ವ್ಯಕ್ತಿ ಬಲಿ ಚಾಮರಾಜನಗರ,ಅ,8,2019(..): ಜಮೀನಿಗೆ ತೆರಳುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಶಿವಲಿಂಗಪ್ಪ(55) ಮೃತ ವ್ಯಕ್ತಿ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಚೌಡಹಳ್ಳಿ ಗ್ರಾಮದ ನಿವಾಸಿ ಶಿವಲಿಂಗಪ್ಪ ಇಂದು ಜಮೀನಿಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಒಂದು ತಿಂಗಳ ಅವಧಿಯಲ್ಲಿ ನರಭಕ್ಷಕ ಹುಲಿ ಎರಡನೇ ಬಲಿ ಪಡೆದಿದೆ. ಬಂಡೀಪುರ ಹುಲಿ ಯೋಜನೆ ಯ ಕುಂದಕೆರೆ ವಲಯದ ಮೂರುಕಲ್ಲು ಸಮೀಪ ಘಟನೆ ನಡೆದಿದೆ. ಅರಣ್ಯಾಧಿಕಾರಿಗಳ ಬೇಜವಾಬ್ದಾರಿಗೆ ಮತ್ತೊಂದು ಬಲಿಯಾಗಿದೆ. ನರಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿಲ್ಲ. ಹೀಗಾಗಿ ಚೌಡಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಸಾವಿನ ಭಯದಲ್ಲಿ ಓಡಾಡುತ್ತಿದ್ದಾರೆ. : - -- -