ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಹಿಳೆಯರು ಸಾವು… ಬಳ್ಳಾರಿ,ಅ,7,2019(..): ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಕಡಲಬಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಬುನ್ನಿ(21), ಕೆ. ಮಂಜಮ್ಮ ಮೃತಪಟ್ಟ ಮಹಿಳೆಯರು. ಬಟ್ಟ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಾಬುನ್ನಿ ಕೆಳಗೆ ಬಿದ್ದಿದ್ದು ಮಾಬುನ್ನಿ ರಕ್ಷಿಸಲು ಬಂದ ಕೆ.ಮಂಜಮ್ಮಗೂ ವಿದ್ಯುತ್ ಶಾಕ್ ಹೊಡೆದಿದೆ. ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – – -