100 ಟಿ-20 ಪಂದ್ಯವಾಡಿದ ಸಾಧನೆ ಮಾಡಿದ ಹರ್ಮನ್‌ಪ್ರೀತ್ ಕೌರ್ ಬೆಂಗಳೂರು, ಅಕ್ಟೋಬರ್ 5, 2019 (..):ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ 100 ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಭಾರತದ ಮೊದಲ ಕ್ರಿಕೆಟ್ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದರು. ಭಾರತದ ಪರ ತಲಾ 98 ಟಿ-20 ಪಂದ್ಯಗಳನ್ನಾಡಿರುವ ಎಂಎಸ್ ಧೋನಿ ಹಾಗೂ ರೋಹಿತ್ ಶರ್ಮಾಗಿಂತ ಮೊದಲೇ ಹರ್ಮನ್‌ಪ್ರೀತ್ ಈ ಮಹತ್ವದ ಸಾಧನೆ ಮಾಡಿದ್ದಾರೆ. ಹರ್ಮನ್‌ಪ್ರೀತ್ 2009ರ ಜೂನ್‌ನಲ್ಲಿ ಟೌಂಟನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಚೊಚ್ಚಲ ಟಿ-20 ಪಂದ್ಯ ಆಡಿದ್ದರು. ಆಲ್‌ರೌಂಡರ್ ಹರ್ಮನ್‌ಪ್ರೀತ್ ಟಿ-20 ಕ್ರಿಕೆಟ್‌ನಲ್ಲಿ ಈತನಕ 27 ವಿಕೆಟ್‌ಗಳು ಹಾಗೂ 2,003 ರನ್ ಗಳಿಸಿದ್ದಾರೆ.