ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ… ಮೈಸೂರು,ಸೆ,29,2019(..) ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರ ಮಹೋತ್ಸವಕ್ಕೆ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಚಾಲನೆ ನೀಡಿದರು. ಇಂದು ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ಉತ್ಸವಕ್ಕೆ ಸಾಹಿತಿ ಎಸ್.ಎಲ್.ಭೈರಪ್ಪ, ಸಿಎಮ್ ಯಡಿಯೂರಪ್ಪ ಚಾಲನೆ ನೀಡಿದರು. ನಿಗಧಿತ ಸಮಯಕ್ಕಿಂತ ಮುಂಚಿತವಾಗಿ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ 9.39 ಕ್ಕೆ ನಿಗಧಿಯಾಗಿದ್ದ ಶುಭ ವೃಶ್ಚಿಕ ಲಗ್ನದ ಮುಹೂರ್ತ. ಆದರೆ 9.35 ಕ್ಕೆ ಪುಷ್ಪಾರ್ಚನೆ ಮಾಡಲಾಯಿತು. : – - -2019