ಇಂದು ಅಥವಾ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ-ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ… ಬೆಂಗಳೂರು,ಸೆ,28,2019(..): ಇಂದು ಅಥವಾ ನಾಳೆ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆಯಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಈಗ ಅರಮನೆ ಮೈದಾನದಲ್ಲಿ ಜೈನ ಸಮುದಾಯದ ಕಾರ್ಯಕ್ರಮ ಇದೆ. ಇದನ್ನು ಮುಗಿಸಿ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಡ್ತೇನೆ. ನಾಳೆ‌ ಮೈಸೂರಿನಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ಇದೆ ಎಂದರು. ಕೇಂದ್ರದಿಂದ ನೆರೆ ಪರಿಹಾರ ವಿಳಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಇಂದು ಅಥವಾ ನಾಳೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಲಿದೆ. ಪ್ರಹ್ಲಾದ್ ಜೋಷಿಯವ್ರು ಈಗ ಬಂದು ಚರ್ಚಿಸಿದ್ದಾರೆ. ನಮ್ಮ ರಾಜ್ಯ ಸೇರಿದಂತೆ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಟ್ಟಿಗೆ ಪರಿಹಾರ ಘೋಷಣೆ ಮಾಡಲಿದೆ ಎಂದು ಸ್ಪಷ್ಟನೆ ನೀಡಿದರು. ಉಪಚುನಾವಣೆಗೆ ಮತ್ತೆ ದಿನಾಂಕ ಘೋಷಣೆಯಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಮತ್ತೆ ದಿನಾಂಕ ಘೋಷಣೆ ಆಗಿದೆ. ನಾವು ಚುನಾವಣೆ ಎದುರಿಸುತ್ತೇವೆ. ಚುನಾವಣೆ ಸಂಬಂಧ ಪಕ್ಷದವರ ಜೊತೆ ಚರ್ಚೆ ಮಾಡ್ತೇನೆ ಎಂದರು. ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ಮಾಡುವುದಕ್ಕೆ ಸ್ವಪಕ್ಷದ ಶಾಸಕರಿಂದಲೇ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಎಲ್ಲರನ್ನೂ ಕರೆಸಿ ಮಾತನಾಡುತ್ತೇವೆ ಎಂದು ಹೇಳಿದರು. : - – - – -