‘ಕೈ’ ತೊರೆದು ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ…. ಬೆಂಗಳೂರು,ಸೆ,27,2019(..): ಕಾಂಗ್ರೆಸ್ ಗೆ ಶಾಕ್ ನೀಡಲು ಮತ್ತೊಬ್ಬ ಕೈ ಮುಖಂಡ, ಮಾಜಿ ಶಾಸಕ ಅನಿಲ್ ಲಾಡ್ ಮುಂದಾಗಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ ಬಗ್ಗೆ ಅನಿಲ್ ಲಾಡ್ ಇಂಗಿತ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸೇರ್ಪಡೆ ಕುರಿತು ಬ್ರೂಸ್ ಪೇಟೆ ಬ್ಲಾಕ್ ಕಾಂಗ್ರೆಸ್ ಗ್ರೂಪ್ ನಲ್ಲಿ ಮಾಜಿ ಶಾಸಕ ಅನಿಲ್ ಲಾಡ್ ಮೆಸೆಜ್ ಹಾಕಿದ್ದಾರೆ ಎನ್ನಲಾಗಿದೆ. ನಾನು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗೋಣ ಎಂದುಕೊಂಡಿದ್ದೇನೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ಕಾರ್ಯಕರ್ತರಿಗೆ ಅನಿಲ್ ಲಾಡ್ ತಿಳಿಸಿದ್ದಾರೆ. ಅನಿಲ್ ಲಾಡ್ ರನ್ನು ಕಾಂಗ್ರೆಸ್ ನಲ್ಲಿ ಕಡೆಗಣಿಸಲಾಗುತ್ತಿದೆಯೇ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ಇದೀಗ ಅನಿಲ್ ಲಾಡ್ ಬಿಜೆಪಿ ಸೇರ್ಪಡೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದು ಮುಂದಿನ ನಿರ್ಧಾರ ಏನು ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕು. : - ---