ಬಿಜೆಪಿ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಕಾಂಗ್ರೆಸ್ ಪ್ರತಿಭಟನೆ… ಬೆಂಗಳೂರು,ಸೆ,26,2019(..): ಬಿಜೆಪಿ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಬಿಟಿಎಂ ಲೇಔಟ್ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಹಾಗೂ ಜಯನಗರ ಶಾಸಕಿ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ನಗರದ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಲಾಗಿದೆ ಹಾಗೆಯೇ ಬಿಬಿಎಂಪಿಯಿಂದ ಅನುದಾನ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯರ್ತರು ಹಾಗೂ ಬಿಬಿಎಂಪಿ ಕಾಂಗ್ರೆಸ್ ಸದಸ್ಯರು ಭಾಗಿಯಾಗಿದ್ದರು. ಮೊದಲು ಬಿಬಿಎಂಪಿ ಕಚೇರಿ ಮುಂಭಾಗ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಆದರೆ ಬಿಬಿಎಂಪಿ ಕಚೇರಿ ಶಿವಾಜಿನಗರ ಕ್ಷೇತ್ರದ ವ್ಯಾಪ್ತಿಯೊಳಗೆ ಬರುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ಹೀಗಾಗಿ ಪ್ರತಿಭಟನಾ ಸ್ಥಳ ಬದಲಾವಣೆ ಮಾಡಿ ಟೌನ್ ಹಾಲ್ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. : - – ---