ಆಯಾತಪ್ಪಿ ಬಿದ್ದು ಬೈಕ್ ಸವಾರರಿಬ್ಬರು ಸಾವು…. ಚಾಮರಾಜನಗರ,ಸೆ,26,2019(..): ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಯಾತಪ್ಪಿ ಬಿದ್ದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನಲ್ಲಿ ನಡೆದಿದೆ. ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೊನ್ನೂರು ಗ್ರಾಮದ ಮಲ್ಲೇಶ್ (45), ಮಹೇಶ್ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತದೇಹಗಳನ್ನ ಈಗಾಗಲೇ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಯಳಂದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : -- --