ಹೊಂದಾಣಿಕೆ ರಾಜಕಾರಣ: ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಯತ್ನಾಳ್ ನಡುವೆ ವಾಕ್ಸಮರ. ಬೆಂಗಳೂರು,ಫೆಬ್ರವರಿ,20,2024(..):ರಾಜ್ಯದಲ್ಲಿ ವಿಧಾನ ಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದ್ದು ಇಂದು ವಿಧಾನಸಭೆ ಕಲಾಪದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತು ಚರ್ಚೆಯಾಯಿತು. ವಿಧಾನಸಭೆ ಕಲಾಪದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ನಡೆಯಿತು. ಈ ಸಮಯದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಲೋಕಸಭೆ ಚುನಾವಣೆ ಆದ ಬಳಿಕ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಇದಕ್ಕೆ ಗ್ಯಾರಂಟಿ ಕೊಡುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಶ್ನಿಸಿದರು. ಇದಕ್ಕೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ ಬೊಮ್ಮಾಯಿವರನ್ನು ಸೋಲಿಸಲು ಪ್ರಯತ್ನಿಸಲಿಲ್ವಾ? ಎಂದು ಟಾಂಗ್ ಕೊಟ್ಟರು. : - - - - – -.