ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ: ಜಸ್ಪ್ರೀತ್​ ಬುಮ್ರಾ ಔಟ್ ಬೆಂಗಳೂರು, ಸೆಪ್ಟೆಂಬರ್ 25, 2019 (..): ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಗೆ ವೇಗದ ಬೌಲರ್​ ಜಸ್ಪ್ರೀತ್​ ಬುಮ್ರಾ ಅಲಭ್ಯರಾಗಿದ್ದಾರೆ. ಮೂರು ಪಂದ್ಯಗಳ ಟೆಸ್ಟ್​ ಸರಣಿಯು ಅ. 2ರಿಂದ ಆರಂಭವಾಗಲಿದ್ದು. ಬೆನ್ನು ನೋವಿನಿಂದ ಬಳಲುತ್ತಿರುವ ಬುಮ್ರಾ ಬದಲಿಗೆ ಮತ್ತೊಬ್ಬ ವೇಗಿ ಉಮೇಶ್​ ಯಾದವ್​ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದೆ.ಈ ಬಗ್ಗೆ ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದೆ.