ಹೆಚ್.ಡಿ ಕುಮಾರಸ್ವಾಮಿ ಮಾಡಿದ್ದ ಸಾಲಮನ್ನಾ ಸರಿಯಾಗಲಿಲ್ಲ-ಮಾಜಿ ಸಿಎಂ ಸಿದ್ಧರಾಮಯ್ಯ ಟೀಕೆ… ಹುಬ್ಬಳ್ಳಿ,ಸೆ,24,2019(..): ಮೈತ್ರಿ ಸರ್ಕಾರದ ಅವಧಿಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಮಾಡಿದ್ದ ಸಾಲಮನ್ನಾ ಸರಿಯಾಗಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದಾರೆ. ಸಾಲಮನ್ನಾ ಬಗ್ಗೆ ರೈತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ನನ್ನ ಅವಧಿಯಲ್ಲಿ ನಾನು ಮಾಡಿದ್ದ ಸಾಲಮನ್ನಾ ಸರಿಯಾಗಿತ್ತು. ಆದರೆ ಹೆಚ್.ಡಿ ಕುಮಾರಸ್ವಾಮಿ ಮಾಡಿದ್ದ ಸಾಲಮನ್ನಾ ಸರಿಯಾಗಿರಲಿಲ್ಲ. ಹೀಗಾಗಿ ಈ ರೀತಿ ಸಮಸ್ಯೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೈತ್ರಿ ಸರ್ಕಾರ ಕೆಟ್ಟದಾಗಿತ್ತು ಅಂತಾ ಹೆಚ್.ಡಿ ಕುಮಾರಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಅದಕ್ಕೆ ನಾನೇನು ಹೇಳಲಿ. ಈಗ ಉಪಚುನಾವಣೆ ಹಿನ್ನೆಲೆ ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿಗೆ ಮತ ಹಾಕಿಸುವಂತೆ ಕುಮಾರಸ್ವಾಮಿ ಹೇಳಿದ್ರು ಎಂದು ಜಿಟಿಡಿಯವರೇ ಹೇಳಿದ್ದಾರೆ. ಇದು ಯಾರ ನಾಟಕ ಎಂದು ಪ್ರಶ್ನಿಸಿದರು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಪಕ್ಷಾಂತರಿಗಳನ್ನು ಸೋಲಿಸಲು ಜನರು ತೀರ್ಮಾನಿಸಿದ್ದಾರೆ. ಪಕ್ಷ ಕೂಡ ಇದಕ್ಕೆ ಎಲ್ಲರೀತಿಯ ಸಿದ್ದತೆ ಮಾಡಿಕೊಂಡಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು. : - - - --