ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಮುಂದೂಡಿಕೆ ಬಗ್ಗೆ ಇಂದು ಸಂಜೆ ವೇಳೆಗೆ ಸ್ಪಷ್ಟ ನಿರ್ಧಾರ- ಪ್ರಾದೇಶಿಕ ಆಯುಕ್ತ ಹರ್ಷಗುಪ್ತ… ಬೆಂಗಳೂರು,ಸೆ,23,2019(..): ರಾಜ್ಯದಲ್ಲಿ 15 ಮಂದಿ ಅನರ್ಹ ಶಾಸಕರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ ಬಗ್ಗೆ ಇಂದು ಸಂಜೆ ವೇಳೆಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ತಿಳಿಸಿದ್ದಾರೆ. 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21 ರಂದು ಚುನಾವಣೆ ನಡೆದು 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಉಪಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಸೆ. 27 ಕ್ಕೆ ನಿಗದಿಯಾಗಿದ್ದ ಮೇಯರ್ ಮತ್ತು ಉಪಮೇಯರ್ ಚುನಾವಣೆ ಮುಂದೂಡಲಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷಗುಪ್ರ, ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಮುಂದೂಡುವ ಬಗ್ಗೆ ಇನ್ನು ನಿರ್ಧಾರ ಕೈಗೊಂಡಿಲ್ಲ. ಇಂದು ಸಂಜೆ ವೇಳೆಗೆ ಸ್ಪಷ್ಟ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. : – – – -- -